ಬೆಂಗಳೂರು: 2021-22ನೇ ಸಾಲಿನ ಪ್ರಥಮ ಪಿಯುಸಿ ತರಗತಿಗೆ ವಿದ್ಯಾರ್ಥಿಗಳಿಗೆ ದಾಖಲಾತಿಯನ್ನು SSLC ಪರೀಕ್ಷೆಯ ಫಲಿತಾಂಶ ಬಂದ ನಂತರ ಆರಂಭಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯು ದಾಖಲಾತಿ ಮಾರ್ಗಸೂಚಿ-2021-22 ಬಿಡುಗಡೆ ಮಾಡಿದ ನಂತರವೇ ದಾಖಲಾತಿ ಮಾಡಿಕೊಳ್ಳಲು ತಿಳಿಸಿದ್ದು, ಅಲ್ಲಿಯವರೆಗೂ ಪ್ರಥಮ ಪಿಯುಸಿಗೆ ದಾಖಲಾತಿ ನೀಡುವಂತಿಲ್ಲ ಹಾಗೂ ಆನ್ ಲೈನ್ ತರಗತಿ ಸಹ ನಡೆಸುವಂತಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.