Deer Hunting: ಮೂವರಿಂದ ಜಿಂಕೆ ಬೇಟೆ: ಓರ್ವನ ಬಂಧನ, ಇಬ್ಬರು ಪರಾರಿ

ಶಿರಸಿ: ತಾಲ್ಲೂಕಿನ ಉಂಚಳ್ಳಿಯಲ್ಲಿ ಜಿಂಕೆ ಬೇಟೆಯಾಡಿದವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ಉಂಚಳ್ಳಿಯ ಗಣಪತಿ ಮಂಜುನಾಥ ಗೌಡ ಬಂಧಿತ ಆರೋಪಿಯಾಗಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ. ಉಂಚಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಗ್ರಾಮದ…

ಶಿರಸಿ: ತಾಲ್ಲೂಕಿನ ಉಂಚಳ್ಳಿಯಲ್ಲಿ ಜಿಂಕೆ ಬೇಟೆಯಾಡಿದವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ಉಂಚಳ್ಳಿಯ ಗಣಪತಿ ಮಂಜುನಾಥ ಗೌಡ ಬಂಧಿತ ಆರೋಪಿಯಾಗಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ.

ಉಂಚಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಗ್ರಾಮದ ಮೂವರು ಸೇರಿ ಜಿಂಕೆ ಬೇಟೆಯಾಡಿದ್ದರು. ಬಳಿಕ ಅಲ್ಲಿನ ಹೊಳೆ ಸಮೀಪ ಜಿಂಕೆ ಮಾಂಸ ಸಿದ್ಧಪಡಿಸುತ್ತಿದ್ದ ವೇಳೆ ಶಿರಸಿ ವಿಭಾಗದ ಉಪ‌ಅರಣ್ಯ ಸಂರಕ್ಷಣಾಧಿಕಾರಿಗಳಾದ ಡಾ.ಅಜ್ಜಯ್ಯ.ಜಿ.ಆರ್. ಹಾಗೂ ಉಪ‌ಅರಣ್ಯ ಸಹಾಯಕ ಸಂರಕ್ಷಣಾಧಿಕಾರಿಗಳಾದ ಎಸ್.ಎಸ್.ನಿಂಗಾಣಿ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಗಿರೀಶ ಎಲ್ ನಾಯ್ಕ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ದಾಳಿ ನಡೆಸಿದ್ದರು‌.

ಈ ವೇಳೆ ಗಣಪತಿ ಗೌಡ ಸಿಕ್ಕಿಬಿದ್ದಿದ್ದು, ಇನ್ನಿಬ್ಬರು ಆರೋಪಿಗಳಾದ ವೆಂಕಟೇಶ ನಾರಾಯಣ ನಾಯ್ಕ ಹಾಗೂ ಗಣೇಶ ಸುಬ್ರಾಯ ನಾಯ್ಕ ತಲೆಮರೆಸಿಕೊಂಡಿದ್ದಾರೆ. ಆರೋಪಿ ಸಹಿತ ಜಿಂಕೆ ಮೃತದೇಹವನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಪಡಿಸಿಕೊಂಡಿದ್ದು, ಪರಾರಿಯಾದ ಆರೋಪಿಗಳ ಪತ್ತೆಗೆ ಶೋಧ ಮುಂದುವರೆಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.