SM Krishna death : ಮಾಜಿ ಸಿಎಂ ಎಸ್.ಎಂ. ಕೃಷ್ಣ (SM Krishna) ನಿಧನರಾದ ಹಿನ್ನಲೆಯಲ್ಲಿ ಇಂದು ನಿಗದಿಯಾಗಿದ್ದ KEA ನೇಮಕಾತಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಇಂದು ಸರ್ಕಾರಿ ರಜೆ ಘೋಷಿಸಲಾಗಿದೆ.
ಹೀಗಾಗಿ ಸಾರ್ವತ್ರಿಕ ರಜೆ ಇರುವ ಕಾರಣ ‘ಉಪಕರಣಾಗಾರ ಮತ್ತು ತರಬೇತಿ’ ಕೇಂದ್ರದಲ್ಲಿನ ಖಾಲಿ ಹುದ್ದೆಗಳಿಗೆ ನಾಳೆ ದಿನಾಂಕ 11-12-2024ರಂದು ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಡಿ.12ಕ್ಕೆ ಮುಂದೂಡಲಾಗಿದೆ. ಉಳಿದಂತೆ ಡಿ.14ರ ಪರೀಕ್ಷಾ ವೇಳಾಪಟ್ಟಿಯಲ್ಲಿ & ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ
ಇನ್ನು, ಎಸ್.ಎಂ.ಕೃಷ್ಣ ನಿಧನದ ಕಾರಣದಿಂದ ಇಂದು (ಡಿ.11) ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ಸರ್ಕಾರಿ ರಜೆಯ ಕಾರಣದಿಂದ ಬುಧವಾರ ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಈ ಪರೀಕ್ಷೆಯ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ವರದಿಯಾಗಿದೆ. ಎಸ್ಎಂ ಕೃಷ್ಣ ಅಂತ್ಯಕ್ರಿಯೆ ಅವರ ತವರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಇಂದು ಸಂಜೆ ನಡೆಯಲಿದೆ.