SM Krishna death : ಎಸ್.ಎಂ. ಕೃಷ್ಣ (SM Krishna) ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸರ್ಕಾರ ವಿಶೇಷ ಗೌರವ ಸಲ್ಲಿಸುವ ಮೂಲಕ ಮಾಜಿ ಮುಖ್ಯಮಂತ್ರಿ ರಾಜ್ಯಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಲು ಮುಂದಾಗಿದೆ.
ಹೌದು, ಕೃಷ್ಣ ಅವರ ಅಗಲಿಕೆಯ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಜೊತೆಗೆ ಮೂರು ದಿನ ಶೋಕಾಚರಣೆ ಮಾಡಲು ಸರ್ಕಾರ ಮುಂದಾಗಿದೆ.
ಇಂದು ಸಂಜೆ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಕೃಷ್ಣ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶಿಸಿದ್ದು,ಇದೇ ಕಾರಣಕ್ಕೆ ರಜೆ ನೀಡಲಾಗಿದೆ.
ಇದನ್ನೂ ಓದಿ: SM Krishna funeral | ಇಂದು ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರ ಅಂತ್ಯಕ್ರಿಯೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.