ಮಂಡ್ಯ: ಮಂಗಳವಾರ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ಒಕ್ಕಲಿಗ ಸಂಪ್ರದಾಯದಂತೆ ನೆರವೇರಲಿದೆ.
ಬೆಂಗಳೂರು- ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಕಾಫಿ ಡೇ ಸಮೀಪದ ಖಾಲಿ ಜಾಗದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಕಾಫಿ ಡೇ ಮಾಲೀಕ ಸಿದ್ದಾರ್ಥ ಪುತ್ರ ಹಾಗೂ ಎಸ್.ಎಂ. ಕೃಷ್ಣ ಅವರ ಮೊಮ್ಮಗ ಅನರ್ಥ್ಯ ಹೆಗಡೆ ಚಿಕಿತ್ಸೆಗೆ ಅಗ್ನಿಸ್ಪರ್ಶ ಮಾಡಲಿದ್ದಾರೆ.
ವೇದ ಬ್ರಹ್ಮ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ 15 ವೈದಿಕರ ತಂಡದಿಂದ ವಿಧಿ ವಿಧಾನ ಕಾರ್ಯಗಳು ನೆರವೇರಲಿವೆ. ಅನೇಕ ಯತಿಗಳು, ವಿವಿಧ ಮಠಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಅಂತ್ಯಕ್ರಿಯೆ ಜರುಗಲಿದೆ. ಅಂತ್ಯಕ್ರಿಯೆಗೆ 1000 ಕೆಜಿ ಗಂಧದ ಕಟ್ಟಿಗೆ ಬಳಕೆ ಮಾಡಲಾಗುತ್ತಿದೆ.
ಬೆಂಗಳೂರಿನಿಂದ ಕೆಂಗೇರಿ, ಬಿಡದಿ, ರಾಮನಗರ ಮಾರ್ಗವಾಗಿ ಪಾರ್ಥಿವ ಶರೀರ ತರಲಿದ್ದು, ಮಾರ್ಗ ಮದ್ಯೆ ಸುಮಾರು 6 ಕಡೆಗಳಲ್ಲಿ ದರ್ಶನಕ್ಕೆ ಅವಕಾಶ ಸಿಗಲಿದೆ. ಬಳಿಕ ಸೋಮನಹಳ್ಳಿಯಲ್ಲಿ ಸಾರ್ವಜನಿಕ ದರ್ಶನ ಮುಗಿದ ನಂತರ ಅಂತ್ಯಕ್ರಿಯ ವಿಧಿ ವಿಧಾನ ಆರಂಭವಾಗಲಿದೆ.