ನಗರದ ಒಳಚರಂಡಿ ಯೋಜನೆಗೆ 250ಕೋಟಿ ರೂ.ಮೀಸಲಿಡಲು ಸಚಿವ ಭೈರತಿ ಬಸವರಾಜ್ ಜೊತೆ ಸೋಮಶೇಖರ್ ರೆಡ್ಡಿ ಚರ್ಚೆ

ಬಳ್ಳಾರಿ, ಫೆ.03: ಕರ್ನಾಟಕ ಸರಕಾರದ ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ ಅವರನ್ನು ಬೆಂಗಳೂರಿನಲ್ಲಿ ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ್ ರೆಡ್ಡಿ ಅವರು ಬುಧವಾರ ಭೇಟಿ ಮಾಡಿದರು. ಶಾಸಕ ಸೋಮಶೇಖರ್ ರೆಡ್ಡಿ ಅವರು ಬಳ್ಳಾರಿ ನಗರದ…

Somasekhar Reddy and Minister Bhairati Basavaraj vijayaprabha

ಬಳ್ಳಾರಿ, ಫೆ.03: ಕರ್ನಾಟಕ ಸರಕಾರದ ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ ಅವರನ್ನು ಬೆಂಗಳೂರಿನಲ್ಲಿ ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ್ ರೆಡ್ಡಿ ಅವರು ಬುಧವಾರ ಭೇಟಿ ಮಾಡಿದರು.

ಶಾಸಕ ಸೋಮಶೇಖರ್ ರೆಡ್ಡಿ ಅವರು ಬಳ್ಳಾರಿ ನಗರದ ಒಳಚರಂಡಿ ಯೋಜನೆಗೆ ಅಂದಾಜು 250 ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಮೀಸಲಿಡುವುದಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಅವರೊಂದಿಗೆ ಚರ್ಚಿಸಿದರು. ಇದೇ ವೇಳೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ದಮ್ಮೂರು ಶೇಖರ್, ರಾಬಕೊ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ವೀರಶೇಖರ ರೆಡ್ಡಿ, ಎಪಿಎಂಸಿ ಸದಸ್ಯರಾದ ಕೃಷ್ಣರೆಡ್ಡಿ, ಮುಖಂಡರಾದ ಶ್ರೀನಿವಾಸ್ ಮೋತ್ಕರ್ ಸೇರಿದಂತೆ ಇತರರು ಇದ್ದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.