ಬೆಂಗಳೂರು: ಜೂನ್ 21 ಇಂದು ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳನ್ನು ಅರ್ಧ ದಿನ ನಡೆಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಈ ಕುರಿತು ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಇಂದಿನ ಪಾಠಗಳನ್ನು ಸರಿದೂಗಿಸಲು ಜೂನ್ 25 ಪೂರ್ಣ ದಿನ ಶಾಲೆ ನಡೆಸಲು ಸೂಚಿಸಲಾಗಿದ್ದು, ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳ ವಯಸ್ಸಿಗನುಗುಣವಾದ ಯೋಗಾಸನ ಮಾಡಿಸಲು ಇಲಾಖೆ ಹೇಳಿದೆ.
ಇನ್ನು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, SDMC ಸದಸ್ಯರು, ಶಿಕ್ಷಕರು ಮತ್ತು ಸ್ಥಳೀಯ ಯೋಗ ಸಂಸ್ಥೆಗಳ ಸಹಕಾರದೊಂದಿಗೆ ಅರ್ಥಪೂರ್ಣವಾಗಿ ಆಚರಿಸಬೇಕೆಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




