ಚಿತ್ರದುರ್ಗ: ‘ಅಧಿಕಾರ ಕಳೆದುಕೊಂಡು ವಿರೋಧ ಪಕ್ಷದಲ್ಲಿ ಕುಳಿತ ಸಿದ್ದರಾಮಯ್ಯ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ’ ಎಂದು ಟೀಕಿಸಿರುವ ಸಮಾಜ ಕಲ್ಯಾಣ ಸಚಿವ ಸಚಿವ ಬಿ.ಶ್ರೀರಾಮುಲು ಅವರು, ‘ಬಹುಶಃ ಸಿದ್ದರಾಮಯ್ಯ ಅವರಿಗೆ ಮತಿಭ್ರಮಣೆ ಆಗಿರಬೇಕು’ ಎಂದು ಲೇವಡಿ ಮಾಡಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಸಚಿವ ಬಿ.ಶ್ರೀರಾಮುಲು ಅವರು, ‘ಕುಮಾರಸ್ವಾಮಿ ಅವರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಿದರು. ಲೋಕಸಭಾ ಚುನಾವಣೆಯಲ್ಲಿ ದೇವೇಗೌಡ ಅವರನ್ನು ಸೋಲಿಸಿದರು ಎಂದು ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಳ್ಳಲು ಮಾತನಾಡುತ್ತಿರುವ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದೆಯೇ’ ಎಂದು ಶ್ರೀರಾಮುಲು ಅವರು ಪ್ರಶ್ನಿಸಿದ್ದಾರೆ.
ಇನ್ನು ಸಚಿವ ಬಿ.ಶ್ರೀರಾಮುಲು ಅವರು ಚಿತ್ರದುರ್ಗದಲ್ಲಿ ಕರೋನ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸೋಂಕಿನ ವಿರುದ್ಧ ಹೋರಾಡಿ ನಿರ್ಣಾಯಕ ಪಾತ್ರ ನಿರ್ವಹಿಸಿದ ಅರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗಿದ್ದು, ಶೀಘ್ರದಲ್ಲೇ ರಾಜ್ಯದ ಎಲ್ಲರಿಗು ಲಸಿಕೆ ರೂಪದಲ್ಲಿರುವ ಸಂಜೀವಿನಿ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.