ಬೆಂಗಳೂರು: ‘ಜೂನ್ 21 ರಿಂದ ಜುಲೈ 5ರವರೆಗೆ ನಿಗದಿಯಾಗಿದ್ದ SSLC ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗದೆ’ ಎಂದು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.
ಹೌದು, ಶಿಕ್ಷಣ ಇಲಾಖೆ ಈ ಕುರಿತಂತೆ ಪ್ರಕಟಣೆ ಹೊರಡಿಸಿದ್ದು, ‘ರಾಜ್ಯದಲ್ಲಿ ಜೂನ್ 21 ರಿಂದ ಜುಲೈ 5ರವೆಗೆ ನಿಗದಿಯಾಗಿದ್ದ SSLC ಪರೀಕ್ಷೆಯನ್ನು ಮುಂದೂಡಲಾಗಿದ್ದು, ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಪರೀಕ್ಷೆಗೂ ಮೊದಲು ಪರೀಕ್ಷಾ ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗುವುದು’ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಇತ್ತೀಚಿಗೆ ರಾಜ್ಯ ಸರ್ಕಾರ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಿ, SSLC ಪರೀಕ್ಷೆಯನ್ನು ನಡೆಸಲು ಆದೇಶಿಸಿತ್ತು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.