BIG NEWS: ರಾಜ್ಯದಾತ್ಯಂತ ಇಂದಿನಿಂದ SSLC ಪರೀಕ್ಷೆ ಆರಂಭ; ಪರೀಕ್ಷೆ ಬರೆಯಬೇಕಿದ್ದ 23 ಮಕ್ಕಳಿಗೆ ಕೊರೋನಾ ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ SSLC ಪರೀಕ್ಷೆ ಆರಂಭವಾಗಲಿದ್ದು, ಕೇವಲ 2 ದಿನಗಳಿಗೆ ಮುಗಿಯುವ ಈ ಪರೀಕ್ಷೆಯು ರಾಜ್ಯಾದ್ಯಂತ ಸುಮಾರು 4884 ಕೇಂದ್ರಗಳಲ್ಲಿ ನಡೆಯಲಿದ್ದು, 8,76,581 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇನ್ನು, ಗುರುವಾರ (ಜುಲೈ 22)…

exams-vijayaprabha-news

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ SSLC ಪರೀಕ್ಷೆ ಆರಂಭವಾಗಲಿದ್ದು, ಕೇವಲ 2 ದಿನಗಳಿಗೆ ಮುಗಿಯುವ ಈ ಪರೀಕ್ಷೆಯು ರಾಜ್ಯಾದ್ಯಂತ ಸುಮಾರು 4884 ಕೇಂದ್ರಗಳಲ್ಲಿ ನಡೆಯಲಿದ್ದು, 8,76,581 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಇನ್ನು, ಗುರುವಾರ (ಜುಲೈ 22) ಕೊನೆಯ ಪರೀಕ್ಷೆ ನಡೆಯಲಿದ್ದು, 1.19 ಲಕ್ಷ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದು, ಈ ವರ್ಷ ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದಾಗಿ ಶಿಕ್ಷಣ ಇಲಾಖೆ ಹೇಳಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಬರೆಯಬಹುದು.

ಪರೀಕ್ಷೆ ಬರೆಯಬೇಕಿದ್ದ 23 ಮಕ್ಕಳಿಗೆ ಕೊರೋನಾ ದೃಢ:

Vijayaprabha Mobile App free

ಇನ್ನು, ಇಂದು SSLC ಪರೀಕ್ಷೆಗಳು ಆರಂಭವಾಗಲಿದ್ದು, ಈ ಸಂಬಂಧ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಆದರೆ, ಇಂದು ಪರೀಕ್ಷೆ ಬರೆಯಬೇಕಿದ್ದ 23 ಮಕ್ಕಳಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಮಕ್ಕಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಲಾ ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.