SSLC RESULT | 22 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ; ಇವರೇ ರಾಜ್ಯಕ್ಕೆ ಪ್ರಥಮ

SSLC RESULT : SSLC ಪರೀಕ್ಷೆ-1ರ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ. 66.14ರಷ್ಟು ಫಲಿತಾಂಶ ಬಂದಿದೆ. ಒಟ್ಟು 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು 625ಕ್ಕೆ 625…

SSLC results

SSLC RESULT : SSLC ಪರೀಕ್ಷೆ-1ರ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ. 66.14ರಷ್ಟು ಫಲಿತಾಂಶ ಬಂದಿದೆ. ಒಟ್ಟು 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳು https://karresults.nic.inಗೆ ಭೇಟಿ ನೀಡಿ ರಿಸಲ್ಟ್‌ ಪರಿಶೀಲಿಸಬಹುದು.

SSLC RESULT: ಇವರೇ ರಾಜ್ಯಕ್ಕೆ ಪ್ರಥಮ

SSLC ಫಲಿತಾಂಶ ಪ್ರಕಟಗೊಂಡಿದೆ. ರಾಜ್ಯದ 22 ವಿದ್ಯಾರ್ಥಿಗಳು 625ಕ್ಕೆ 625 ಮಾರ್ಕ್ಸ್‌ ಪಡೆದಿದ್ದಾರೆ. ಬೆಂಗಳೂರು ಗ್ರಾಮೀಣ ಜಿಲ್ಲೆಯ ಭಾವನಾ, ಬೆಂಗಳೂರು ದಕ್ಷಿಣ ಜಿಲ್ಲೆಯ ಜಾಹ್ನವಿ, ನಮಿತ, ಮೈಸೂರು ಜಿಲ್ಲೆಯ ಧನುಷ್, ಶಿವಮೊಗ್ಗ ಜಿಲ್ಲೆಯ ನಮನ, ಚಿತ್ರದುರ್ಗ ಜಿಲ್ಲೆಯ ನಂದನ್, ಹಾಗೂ ಮಂಡ್ಯ ಜಿಲ್ಲೆಯ ಧೃತಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಾಗಿದ್ದಾರೆ.

SSLC ಫಲಿತಾಂಶ: ಈ ಜಿಲ್ಲೆ ರಾಜ್ಯಕ್ಕೆ ಪ್ರಥಮ

ಮಾರ್ಚ್‌/ಏಪ್ರಿಲ್‌ನಲ್ಲಿ ನಡೆದಿದ್ದ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ಸಚಿವ ಮಧು ಬಂಗಾರಪ್ಪ ಫಲಿತಾಂಶ ಬಿಡುಗಡೆ ಮಾಡಿದ್ದಾರೆ. ರಾಜ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದರೆ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ. ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ (625/625) ಪಡೆದಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.