ಕೆಲವೇ ನಿಮಿಷಗಳಲ್ಲಿ SSLC ಫಲಿತಾಂಶ ಪ್ರಕಟ; ಫಲಿತಾಂಶ ಈ ರೀತಿ ಚೆಕ್ ಮಾಡಿ

SSLC results : ಮಾರ್ಚ್‌/ಏಪ್ರಿಲ್‌ನಲ್ಲಿ ನಡೆದಿದ್ದ SSLC ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಳಗ್ಗೆ 11:30ಕ್ಕೆ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ಹೌದು, ಮಧ್ಯಾಹ್ನ 12:30ರಿಂದ ವೆಬ್‌ಸೈಟ್‌ನಲ್ಲಿ (https://karresults.nic.in) ಫಲಿತಾಂಶ ಲಭ್ಯವಾಗಲಿದೆ.…

SSLC results

SSLC results : ಮಾರ್ಚ್‌/ಏಪ್ರಿಲ್‌ನಲ್ಲಿ ನಡೆದಿದ್ದ SSLC ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಳಗ್ಗೆ 11:30ಕ್ಕೆ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ.

ಹೌದು, ಮಧ್ಯಾಹ್ನ 12:30ರಿಂದ ವೆಬ್‌ಸೈಟ್‌ನಲ್ಲಿ (https://karresults.nic.in) ಫಲಿತಾಂಶ ಲಭ್ಯವಾಗಲಿದೆ. ಮಾ.21ರಿಂದ ಏ.4ರವರೆಗೆ ರಾಜ್ಯಾದ್ಯಂತ 2,818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷಾ ಅಕ್ರಮ ತಡೆಗೆ ಈ ಬಾರಿಯೂ ವೆಬ್ ಕಾಸ್ಟಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿತ್ತು.

SSLC ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ

ವಿದ್ಯಾರ್ಥಿಗಳು ತಮ್ಮ SSLC ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರ ಮಾಹಿತಿಯನ್ನು ನಮೂದಿಸಿ ಪಡೆಯಬಹುದಾಗಿದೆ.

Vijayaprabha Mobile App free

ವೆಬ್‌ಸೈಟ್‌ನಲ್ಲಿ ಇಂದು ಮಧ್ಯಾಹ್ನ 12:30ರ ನಂತರವೇ ರಿಲಸ್ಟ್‌ ನಿಮಗೆ ಲಭ್ಯವಾಗಲಿದೆ. SMS ಮೂಲಕ ಸಹ ನೀವು ಫಲಿತಾಂಶ ಪಡೆಯಬಹುದಾಗಿದೆ. KAR 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿದರೆ ಫಲಿತಾಂಶ ಅದೇ ಮೊಬೈಲ್‌ ಸಂಖ್ಯೆಗೆ ಕಳುಹಿಸಲಾಗುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply