ಶಿಕ್ಷಣ ಸುದ್ದಿ (Education Update): 2026ನೇ ಸಾಲಿನ ಎಸ್ಸೆಸ್ಸೆಲ್ಸಿ (SSLC) ಬೋರ್ಡ್ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಆಡಳಿತ ಮಂಡಳಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿಗಳು ಯಾವುದೇ ಟೆನ್ಷನ್ ಇಲ್ಲದೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ.
ಹೌದು, ಈ ವಿಷಯವನ್ನು ಹಾಸನ ಜಿಲ್ಲಾಧಿಕಾರಿ (DC) ಲತಾಕುಮಾರಿ ಅವರು ಫೆಬ್ರವರಿ 20 ರಂದು ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಉಚಿತ ಪ್ರಯಾಣದ ನಿಯಮಗಳೇನು?
ಹಾಲ್ ಟಿಕೆಟ್ ಕಡ್ಡಾಯ: ವಿದ್ಯಾರ್ಥಿಗಳು ಬಸ್ ಹತ್ತಿದ ಬಳಿಕ ನಿರ್ವಾಹಕರಿಗೆ (Conductor) ತಮ್ಮ ಪರೀಕ್ಷೆಯ ‘ಹಾಲ್ ಟಿಕೆಟ್’ (Hall Ticket) ತೋರಿಸಿದರೆ ಸಾಕು, ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಪ್ರಯಾಣಿಸಬಹುದು.
ಯಾವಾಗಿನಿಂದ ಪರೀಕ್ಷೆ?: ಈ ಬಾರಿಯ SSLC ಮುಖ್ಯ ಪರೀಕ್ಷೆಗಳು ಮಾರ್ಚ್ 18 ರಿಂದ ಆರಂಭವಾಗಿ ಏಪ್ರಿಲ್ 2 ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಮಾತ್ರ ಉಚಿತ ಪ್ರಯಾಣದ ಸೌಲಭ್ಯವಿರುತ್ತದೆ.
ಡಿಸಿ ಸೂಚನೆ: ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವಂತೆ ಈಗಾಗಲೇ KSRTC ವಿಭಾಗೀಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಶೀಘ್ರದಲ್ಲೇ ಅಧಿಕೃತ ಲಿಖಿತ ಆದೇಶವೂ ಹೊರಬೀಳಲಿದೆ ಎಂದು ಹಾಸನ ಡಿಸಿ ಸ್ಪಷ್ಟಪಡಿಸಿದ್ದಾರೆ.
ಗ್ರಾಮೀಣ ಭಾಗದಿಂದ ಪರೀಕ್ಷಾ ಕೇಂದ್ರಗಳಿಗೆ ಬರುವ ಸಾವಿರಾರು ವಿದ್ಯಾರ್ಥಿಗಳಿಗೆ ಈ ನಿರ್ಧಾರದಿಂದ ಆರ್ಥಿಕ ಹೊರೆ ತಪ್ಪಲಿದ್ದು, ನೆಮ್ಮದಿಯಾಗಿ ಪರೀಕ್ಷೆ ಎದುರಿಸಲು ಸಹಾಯಕವಾಗಲಿದೆ ಎಂದು ತಿಳಿಸಿದ್ದಾರೆ.
(ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಈ ಉಪಯುಕ್ತ ಮಾಹಿತಿಯನ್ನು ತಪ್ಪದೇ ಶೇರ್ ಮಾಡಿ)




