ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಸರ್ಕಾರ ಅಧಿಕೃತ ವೆಬ್ ಸೈಟ್ https://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಹೌದು, ವಿದ್ಯಾರ್ಥಿಗಳು ರಿಜಿಸ್ಟರ್ ಮಾಡಿದ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕ ಫಲಿತಾಂಶದ ಸಂದೇಶ ಬರಲಿದ್ದು, 2022ರ ಜೂನ್ 27ರಿಂದ ಜುಲೈ 4ರ ವರೆಗೆ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ನಡೆದಿತ್ತು. ಈ ಬಾರಿ 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.
ಇನ್ನು, ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅವರಲ್ಲಿ ಶೇ.39.59 ರಷ್ಟು ಉತ್ತೀರ್ಣರಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ತಿಳಿಸಿದ್ದಾರೆ.