ಡಿಕೆಶಿ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ; ಡಿಕೆಶಿ ಮಾತಿಗೆ ಸಿದ್ದರಾಮಯ್ಯ ಅವರೇ ಬೆಲೆ ಕೊಡುವುದಿಲ್ಲ: ಎಸ್ ಟಿ ಸೋಮಶೇಖರ್

ಮೈಸೂರು: ನವಂಬರ್ 3 ರಂದು ಆರ್ ಆರ್ ನಗರ ಉಪಚುನಾವಣೆ ವಿಚಾರ ಸಂಬಂಧಿಸಿದಂತೆ ಸಚಿವ ಎಸ್ ಟಿ ಸೋಮಶೇಖರ್ ಅವರು ಡಿ.ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್ ಆರ್ ನಗರ ಉಪಚುನಾವಣೆ ಬಿಜೆಪಿ…

s t somashekar vijayaprabha news

ಮೈಸೂರು: ನವಂಬರ್ 3 ರಂದು ಆರ್ ಆರ್ ನಗರ ಉಪಚುನಾವಣೆ ವಿಚಾರ ಸಂಬಂಧಿಸಿದಂತೆ ಸಚಿವ ಎಸ್ ಟಿ ಸೋಮಶೇಖರ್ ಅವರು ಡಿ.ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್ ಆರ್ ನಗರ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರನ್ನು ಸೋಲಿಸಲು ಸಾಧ್ಯವೇ ಇಲ್ಲ ಎಂದು ಮೈಸೂರಿನಲ್ಲಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿಕೆ ನೀಡಿದ್ದಾರೆ.

ತಾಯಿಗೆ ಮೋಸ ಮಾಡಿ ಹೋದರೆಂದು ಹೇಳಿಕೆ ವಿಚಾರ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಡಿಕೆಶಿ ಮಾತಿಗೆ ಸಿದ್ದರಾಮಯ್ಯ ಅವರೇ ಬೆಲೆ ಕೊಡುವುದಿಲ್ಲ. ನಾವು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಗಳಂತೆ ಇದ್ದೆವು. ನಮ್ಮನ್ನು ಕಾಂಗ್ರೆಸ್ ಪಕ್ಷ ಬಿಡಿಸಿದವರು ಯಾರೆಂದು ಸಚಿವ ಸೋಮಶೇಖರ್ ಅವರು ಪ್ರಶ್ನಿಸಿದ್ದಾರೆ.

ಇನ್ನು ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೇ ಇಲ್ಲ. ಶೇಕಡಾ 99 ರಷ್ಟು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷದವರು ಹೊರಗಿನಿಂದ ಜನರನ್ನು ಕರೆತಂದು ಪ್ರಚಾರ ಮಾಡುತ್ತಿದ್ದಾರೆ ಎಂದು ಮೈಸೂರಿನಲ್ಲಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿಕೆ ನೀಡಿದ್ದಾರೆ.

Vijayaprabha Mobile App free

ಇದನ್ನು ಓದಿ: ಮಹತ್ವದ ನಿರ್ಧಾರ: ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಲಾ 25,000 ಪರಿಹಾರ ಘೋಷಣೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.