ಸಿಎಂ ಬಸವರಾಜ ಬೊಮ್ಮಾಯಿಯವರು ತಮ್ಮ 2ನೇ ಬಜೆಟ್ ಅನ್ನು ಮಂಡಿಸಿದ್ದು, ಶೀಘ್ರವೇ 2 ಸಾವಿರ ಪೊಲಿಸ್ ಸಿಬ್ಬಂದಿಗಳ ಹುದ್ದೆಗಳ ನೇಮಕಾತಿಗೆ ಕ್ರಮಕೈಗೊಳ್ಳಲಾಗುವುದು ಎಂದು ಘೋಷಿಸಿದ್ದಾರೆ.
ಪೊಲೀಸ್ ಸಿಬ್ಬಂದಿ ವಾಹನ ಖರೀದಿಗೆ 50 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಮ್ಮ ಬಜೆಟ್‌ನಲ್ಲಿ ತಿಳಿಸಿದ್ದಾರೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಅಬ್ದುಲ್ ಕಲಾಂ ವಸತಿ ಶಾಲೆ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತರ ವಸತಿ ಶಾಲೆಗಳನ್ನು ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.