ರಾಜ್ಯದ ತಾಲ್ಲೂಕು ಆಸ್ಪತ್ರೆಗಳಲ್ಲಿ ಹೆರಿಗೆಯಾದ ತಾಯಂದಿರು ಮತ್ತು ನವಜಾತ ಶಿಶುಗಳಿಗೆ ಸುರಕ್ಷಿತವಾಗಿ ಮನೆಗೆ ತಲುಪಿಸಲು ‘ನಗು ಮಗು’ ವಾಹನಗಳನ್ನು ಒದಗಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
ಕೇಂದ್ರದ ಸಹಭಾಗಿತ್ವದಲ್ಲಿ ಯಾದಗಿರಿ, ಹಾವೇರಿ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಕಾರ್ಯಾರಂಭಗೊಳಿಸಲಾಗಿದೆ. ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ.
ರಾಯಚೂರಿನಲ್ಲಿ AIIMS.. ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ:
* ರಾಯಚೂರಿನಲ್ಲಿ AIIMS ಮಾದರಿಯ ಆಸ್ಪತ್ರೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ
* ಬೆಂಗಳೂರು, ಹುಬ್ಬಳ್ಳಿ, ಮೈಸೂರು ಮತ್ತು ಕಲಬುರಗಿಯ 4 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ IVF ಕ್ಲಿನಿಕ್‌ಗಳನ್ನು 6 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭ
* ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಸಂಪೂರ್ಣ ಸ್ವಯಂಚಾಲಿತ ಮತ್ತು ಕೇಂದ್ರೀಕೃತ ರಕ್ತನಿಧಿ ನಿರ್ವಹಣಾ ವ್ಯವಸ್ಥೆಯನ್ನು ಸ್ಥಾಪನೆ