ರಾಜ್ಯದಲ್ಲಿ ರೈತರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರ ಭರ್ಜರಿ ಘೋಷಣೆ ಮಾಡಿದ್ದು, ಸಣ್ಣ ರೈತರಿಗಾಗಿ ‘ಜೀವನ್ ಜ್ಯೋತಿ ಬೀಮಾ’ ಎಂಬ ಯೋಜನೆ ಘೋಷಣೆ ಮಾಡಲಾಗಿದ್ದು, ಅದಕ್ಕಾಗಿ 180 ಕೋಟಿ ರೂ ಮೀಸಲಿಡಲಾಗಿದೆ.
ಶೂನ್ಯ ಬಡ್ಡಿದರ ಸಾಲದ ಪ್ರಮಾಣವನ್ನು 3 ಲಕ್ಷ ರೂ ನಿಂದ 5 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ರಾಜ್ಯದ ರೈತರ ಭೂಮಿಯನ್ನು ಹಸಿರನ್ನಾಗಿಸುವ ಉದ್ದೇಶದಿಂದ ರೈತರಿಗೆ ಬೆಳೆಗೆ ಕೃಷಿ ಹೊಂಡವನ್ನು ನಿರ್ಮಿಸುವ ಕಾರ್ಯಕ್ಕೆ ಉತ್ತೇಜನ ನೀಡುವ ಸಲುವಾಗಿ ‘ಜಲನಿಧಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಹೊಸ ಯೋಜನೆಯನ್ನು ಕೂಡ ಪ್ರಾರಂಭಿಸಿ ಅದನ್ನು ನರೇಗಾ ವ್ಯಾಪ್ತಿಗೆ ತರಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.