ಬಹು ನಿರೀಕ್ಷಿತ ರಾಜ್ಯ ಸರ್ಕಾರದ 2023-24ನೇ ಸಾಲಿನ ಬಜೆಟ್ ಇಂದು ಮಂಡನೆಯಾಗಲಿದ್ದು, ಬೆಳಿಗ್ಗೆ 10.15ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡಲಿದ್ದಾರೆ.
ಪ್ರಸ್ತುತ ಬಿಜೆಪಿ ಸರ್ಕಾರದ ಕೊನೆಯ ಮತ್ತು ವಿಧಾನಸಭಾ ಚುನಾವಣೆ ಪೂರ್ವ ಬಜೆಟ್ ಇದಾಗಿರುವ ಹಿನ್ನೆಲೆ, ಬಜೆಟ್ ನತ್ತ ಎಲ್ಲರ ಚಿತ್ತ ನೆಟ್ಟಿದೆ. ಚುನಾವಣೆಯ ಲಾಭ-ನಷ್ಟ ಲೆಕ್ಕ ಹಾಕಿಕೊಂಡು ಈ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದೆ. ಸಿಎಂ ಬಸವರಾಜ ಬೊಮ್ಮಾಯಿವರು ಮಂಡಿಸುತ್ತಿರುವ ಎರಡನೇ ಬಜೆಟ್ ಇದಾಗಿದೆ.
ರಾಜ್ಯ ಬಜೆಟ್‌ನ ನಿರೀಕ್ಷೆಗಳೇನು?
ಇಂದು ಸಿಎಂ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದು, ವಿವಿಧ ವರ್ಗದ ಜನರು ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.
ರೈತರಿಗೆ ನೀಡಲಾಗುವ ಶೂನ್ಯ ಬಡ್ಡಿದರದ ಮಿತಿ ₹3 ಲಕ್ಷದಿಂದ ₹5 ಲಕ್ಷಕ್ಕೆ ಏರಿಕೆ ಮಾಡುವ ಸಂಭವವಿದೆ. ಕುಟುಂಬ ನಿರ್ವಹಣೆ ಮಾಡುವ ಮಹಿಳೆಯರಿಗೆ ಗೌರವ ಧನ ಹೆಚ್ಚಿಸುವ ಯೋಜನೆ ಘೋಷಿಸುವ ಸಾಧ್ಯತೆಯಿದೆ.
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತು 7ನೇ ವೇತನ ಆಯೋಗ ನೀಡುವ ವರದಿ ಅನುಷ್ಠಾನದ ಭರವಸೆ ನೀಡಲಿದ್ದಾರೆ.