ಬೆಂಗಳೂರು: ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದು, ಸಾರಿಗೆ ನೌಕರರ ವೇತನ ಶ್ರೇಣಿಯನ್ನು ಶೇ.15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಹೌದು, ಸಾರಿಗೆ ನೌಕರರ ವೇತನ ಶ್ರೇಣಿಯನ್ನು ಶೇ.15ರಷ್ಟು ಹೆಚ್ಚಿಸಿದ್ದು, 2023ರ ಮಾರ್ಚ್ ತಿಂಗಳಿನಿಂದ ಅನ್ವಯವಾಗುವಂತೆ ಪರಿಷ್ಕೃತ ವೇತನ ಜಾರಿಯಾಗಲಿದೆ. ಇದರೊಂದಿಗೆ ನಾಲ್ಕೂ ನಿಗಮದ(KSRTC, BMTC, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಸಾರಿಗೆ) ನೌಕರರಿಗೆ ವೇತನದಲ್ಲಿ ಹೆಚ್ಚಳವಾಗಲಿದೆ.
ಇದನ್ನು ಓದಿ: ಎಣ್ಣೆ ಹೊಡೆದಾಗ ಕೊಹ್ಲಿ ಸ್ಥಿತಿ ಹೇಗಿರುತ್ತೆ.. ವಿರಾಟ್ ಕೊಹ್ಲಿ ಕುಡಿತದ ಸೀಕ್ರೆಟ್ ಬಿಚ್ಚಿಟ್ಟ ಪತ್ನಿ ಅನುಷ್ಕಾ ಶರ್ಮಾ
ಇನ್ನು, ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮಾರ್ಚ್ 21ರಿಂದ ಮುಷ್ಕರಕ್ಕೆ ಕರೆ ನೀಡಿದ್ದರು. ಮೂಲ ವೇತನದಲ್ಲಿ ಶೇ.25ರಷ್ಟು ಹೆಚ್ಚಳ ಮಾಡಬೇಕೆಂಬುದು ನೌಕರರ ಬೇಡಿಕೆಯಾಗಿತ್ತು.ಆದರೆ, ಸಾರಿಗೆ ನೌಕರರ ವೇತನವನ್ನು, ಶೇ.15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನವನ್ನು ಪರಿಷ್ಕರಿಸಿ ಈಗಿರುವ ವೇತನದ ಮೇಲೆ ಶೇ.20ರಷ್ಟು ಹೆಚ್ಚಳ ಆದೇಶ ನೀಡಿತ್ತು,
ಇದನ್ನು ಓದಿ: KPSC ಯಲ್ಲಿ 47 ಸಹಕಾರಿ ಸಂಘಗಳ ನಿರೀಕ್ಷಕರ ಹುದ್ದೆಗಳು; Degree ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ