BPL card : ಬಿಪಿಎಲ್ ಕಾರ್ಡ್ ರದ್ದು ಮಾಡತ್ತಿರುವ ವಿಚಾರದಲ್ಲಿ ಜನಾಕ್ರೋಶದ ಬೆನ್ನಲೇ ಸರ್ಕರವು ಎಚ್ಚೆತ್ತು ಕೊಂಡಿದ್ದು, ಯಾರೊಬ್ಬರ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ
ಹೌದು, ಬಿಪಿಎಲ್ ಕಾರ್ಡ್ ರದ್ದು ಮಾಡತ್ತಿರುವ ವಿಚಾರದಲ್ಲಿ ಜನಾಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸರ್ಕರವು ಎಚ್ಚೆತ್ತುಕೊಂಡಿದ್ದು, ಸರ್ಕಾರಿ ನೌಕರರು ಹಾಗೂ ತೆರಿಗೆ ಪಾವತಿಸುವವರ ಬಿಪಿಎಲ್ ಕಾರ್ಡ್‌ಗಳನ್ನು ಹೊರತುಪಡಿಸಿ, ಬಡರ ಪಡಿತರ ಚೀಟಿಗಳನ್ನು ರದ್ದು ಮಾಡಕೂಡದು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ 14 ಲಕ್ಷ BPL card ರದ್ದು!
ಒಂದು ವೇಳೆ, ಬಡವರ ಬಿಪಿಎಲ್ ಕಾರ್ಡ್‌ಗಳು ರದ್ದಾಗಿದ್ದರೆ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಆಹಾರ ಇಲಾಖೆಯ ಅಧಿಕಾರಿಗಳಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.
BPL card : 22 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲು ಮುಂದಾಗಿದ್ದ ಸರ್ಕಾರ
ಕಳೆದ ಆಗಸ್ಟ್ ತಿಂಗಳಿನಲ್ಲೇ ಇ ಗವರ್ನೆನ್ಸ್ ಇಲಾಖೆ ನೀಡಿದ ಮಾಹಿತಿಯನ್ನು ಇಟ್ಟುಕೊಂಡೇ ಆಹಾರ ಇಲಾಖೆ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲು ಮುಂದಾಗಿದ್ದು, ಸರ್ಕಾರಿ ನೌಕರರು ಅಲ್ಲದ ಹಾಗೂ ತೆರಿಗೆ ಕಟ್ಟುದವರ ಕುಟುಂಬಗಳ ಬಿಪಿಎಲ್ ಕಾರ್ಡ್‌ಗಳು ಸಹ ರಿಜೆಕ್ಟ್ ಆಗಿವೆ. ಆದ್ರೆ, ಇದಕ್ಕೆ ವ್ಯಾಪಕ ಜನಾಕ್ರೋಶ ವ್ಯಕ್ತವಾಗಿದ್ದು, ಇದರಿಂದ ನೊಂದ ಜನರು ಸಾಮಾಜಿಕ ಜಾಲತಾಣ, ಮಾಧ್ಯಮಗಳ ಮೂಲಕ ಸರ್ಕಾರವನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಇನ್ನು ಸರ್ಕಾರ ಆಪರೇಷನ್ ರೇಷನ್ ಕಾರ್ಡ್ಗೆ ಇಳಿದ ವಿಚಾರ ವಿಪಕ್ಷ ನಾಯಕರನ್ನ ಸಿಡಿದೇಳುವಂತೆ ಮಾಡಿದ್ದು, ಬಡವರ ಕಾರ್ಡ್ ರದ್ದಾಗಿರೋ ಕೆಲ ಪ್ರಕರಣಗಳನ್ನ ಮುಂದಿಟ್ಟು ಕೇಸರಿ ಕಲಿಗಳು ವಾಗ್ಬಾಣ ಬಿಡ್ತಿದ್ದಾರೆ. ಮನೆಮನೆಗೆ ತೆರಳಿ ಸಮಸ್ಯೆಗಳನ್ನ ಆಲಿಸುತ್ತಿದ್ದು, ಸರ್ಕಾರದ ವಿರುದ್ಧ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ.
ಇದನ್ನೂ ಓದಿ: ಅನರ್ಹರ BPL card ಮಾತ್ರ ರದ್ದು; ಅರ್ಹರಿಗೆ ರೇಷನ್ ಕಾರ್ಡ್ ರದ್ದು ಮಾಡೋಲ್ಲ: ಸಿಎಂ ಸಿದ್ದರಾಮಯ್ಯ
ಇನ್ನು, ಇದು ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ತಿಳಿದ ಸಿಎಂ ಸಿದ್ದರಾಮಯ್ಯ ಸರ್ಕಾರ, ಕಾರ್ಡ್ ರದ್ದು ಮಾಡದಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಆದೇಶ ಮಾಡಿದ್ದು, ವಿನಾಕಾರಣ ರದ್ದು ಮಾಡಿದರೆ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನು ಸಹ ನೀಡಿದ್ದು, ಈಗಾಗಲೇ ರದ್ದಾಗಿರುವ ಬಿಪಿಎಲ್ ಕಾರ್ಡ್‌ಗಳನ್ನು ಸಂಬಂಧಪಟ್ಟವರಿಗೆ ಸರಿ ಮಾಡಿ ವಾಪಸ್ ನೀಡುವಂತೆ ಖಡಕ್ ಸೂಚನೆ ನೀಡಿದ್ದಾರೆ.
BPL card : ರೇಷನ್ ಕಾರ್ಡ್ ಸ್ಟೇಟಸ್ ತಿಳಿಯಲು ಇಲ್ಲಿದೆ ಡೈರೆಕ್ಟ್ ಲಿಂಕ್
ರಾಜ್ಯದಲ್ಲಿ ಇದೀಗ ಆಪರೇಷನ್ ರೇಷನ್ ಕಾರ್ಡ್‌ನದ್ದೆ ಸದ್ದು ಜೋರಾಗಿದ್ದು, ಸಾವಿರ, ಲಕ್ಷಗಳ ಲೆಕ್ಕದಲ್ಲಿ ರೇಷನ್ ಕಾರ್ಡ್‌ಗಳು ರದ್ದಾಗಿವೆ ಎಂದು ಸುದ್ದಿಗಳನ್ನು ಕಾಣುತ್ತಿದ್ದೇವೆ. ಈ ಮಧ್ಯೆ ಸಿಎಂ, ಸಚಿವರು ಸ್ಪಷ್ಟನೆಗಳು ಸಿಗುತ್ತಿದ್ದು, ಇದೆಲ್ಲದರ ನಡುವೆ ರೇಷನ್ ತರಲು ಹೋದ ಗ್ರಾಹಕರಿಗೆ ಪಡಿತರ ರದ್ದಾಗಿದೆ ಎಂಬ ಮಾಹಿತಿ ಸಿಗುತ್ತಿರುವ ಪ್ರಕರಣಗಳು ಇವೆ. ಹೀಗಾಗಿ ಎಷ್ಟೆಲ್ಲ ಗೊಂದಲಗಳು ಸದ್ಯ ಮೂಡಿದ್ದು ನಿಮ್ಮ ಕಾರ್ಡ್ ರದ್ದಾಗಿದೆ ಇಲ್ಲವೋ ಎಂಬುದನ್ನು ತಿಳಿಯಲು ಹೀಗೆ ಮಾಡಿ.
ಲಿಂಕ್: https://ahara.kar.nic.in/Home/EServices
ವಿಡಿಯೋ ಕೃಪೆ: YT/ Manu Kumar GN