ಬೆಂಗಳೂರು: ನಟಿ ರಾನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿ ಆದೇಶಿಸಿತ್ತು. ಆದರೆ, ಹಠಾತ್ ಬೆಳವಣಿಗೆಯಲ್ಲಿ, ರಾಜ್ಯ ಸರ್ಕಾರವು ನಟಿ ರಾನ್ಯಾ ರಾವ್ ಪ್ರಕರಣದಲ್ಲಿ ಸಿಐಡಿ ತನಿಖೆಯ ಆದೇಶವನ್ನು ಹಿಂತೆಗೆದುಕೊಂಡಿದೆ.
ನಟಿ ರಾನ್ಯಾ ರಾವ್ ಅವರ ಚಿನ್ನದ ಕಳ್ಳಸಾಗಣೆ ಪ್ರಕರಣದ ಬಗ್ಗೆ ಎಸಿಎಸ್ ಗೌರವ್ ಗುಪ್ತಾ ನೇತೃತ್ವದಲ್ಲಿ ಪ್ರತ್ಯೇಕ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ, ನಟಿ ರಾನ್ಯಾ ರಾವ್ ಅವರ ಕಳ್ಳಸಾಗಣೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ನಟಿ ರಾನ್ಯಾ ರಾವ್ ದುಬೈನಿಂದ ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ. 14 ಕೆಜಿ ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ಆಕೆಯನ್ನು ಬಂಧಿಸಲಾಗಿದೆ. ಆಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು ಪ್ರಕರಣ ಉನ್ನತ ತನಿಖೆಗೆ ಒತ್ತಡ ಕೇಳಿಬಂದಿದೆ.