ರಾಜ್ಯ ಸರ್ಕಾರದ ಮಹತ್ವದ ವಿದ್ಯಾಗಮ ಯೋಜನೆ ತಾತ್ಕಾಲಿಕ ಸ್ಥಗಿತ..!

ಬೆಂಗಳೂರು : ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ರಾಜ್ಯ ಸರ್ಕಾರದ ಮಹತ್ವದ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಇಂದು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ. ಹೌದು, ಶಿಕ್ಷಕರು ಮತ್ತು ಶಾಲಾ ಮಕ್ಕಳಿಗೆ ಕೊರೋನಾ…

ಬೆಂಗಳೂರು : ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ರಾಜ್ಯ ಸರ್ಕಾರದ ಮಹತ್ವದ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಇಂದು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ.

ಹೌದು, ಶಿಕ್ಷಕರು ಮತ್ತು ಶಾಲಾ ಮಕ್ಕಳಿಗೆ ಕೊರೋನಾ ಸೋಂಕು ತಗುಲಿರುವ ಹಾಗೂ ಸೋಂಕಿನಿಂದಲೇ ಮೃತಪಟ್ಟಿರುವ ಕುರಿತು ಜಿಲ್ಲಾವಾರು ವರದಿ ಲಭ್ಯವಾಗುವವರೆಗೆ ಯೋಜನೆಯನ್ನು ಮುಂದುವರಿಸಬೇಡಿ ಎಂದು ಸಚಿವರು ಸೂಚಿಸಿದ್ದಾರೆ.

ಕರೋನ ಸೋಂಕಿನಿಂದ ಶಾಲೆಗಳು ತೆರೆಯದ ಕಾರಣ ಸರ್ಕಾರ ವಿದ್ಯಾಗಮ ಯೋಜನೆಯನ್ನು ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ಒದಗಿಸಲು ಮುಂದಾಗಿತ್ತು. ಆದರೆ ವಿದ್ಯಾಗಮ ಯೋಜನೆ ಅಡಿಯಲ್ಲಿ ಪಾಠ ಮಾಡಲು ಹೋದ ಶಿಕ್ಷಕರೇ ಸಾವನ್ನಪ್ಪಿದ್ದಾರೆ ಎಂದು ಬಂದಿತ್ತು. ಇದರಿಂದ ಸರ್ಕಾರದ ವಿರುದ್ಧ ವಿದ್ಯಾಗಮ ಯೋಜನೆ ನಿಲ್ಲಿಸುವಂತೆ ತೀವ್ರ ವಿರೋಧ ವ್ಯಕ್ತವಾಗಿತ್ತು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.