ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರು ಈ ಶೈಕ್ಷಣಿಕ ವರ್ಷದಲ್ಲಿ ಪ್ರತಿ ಮಗುವಿಗೆ ಪ್ರತ್ಯೇಕ ಪ್ರೊಫೈಲ್ಗಳನ್ನು ನಿರ್ವಹಣೆ ಮಾಡಬೇಕು ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಮತ್ತು ನಿರ್ದಿಷ್ಟ ಶೈಕ್ಷಣಿಕ ವರ್ಷದಲ್ಲಿ ಮಕ್ಕಳ ಬಗ್ಗೆ ನಿಗಾ ಇಡಲು ಶಿಕ್ಷಣ ಇಲಾಖೆಯು ಶಿಕ್ಷಕರಿಗೆ ನೀಡಲಾಗುವ ಹೊಸ ನಿರ್ದೇಶನಗಳ ಭಾಗ ಇದಾಗಿದ್ದು, ಪರೀಕ್ಷೆಗಳು ನಡೆಸದೆ 1-9ನೇ ತರಗತಿಯ ಮಕ್ಕಳನ್ನು ಪಾಸ್ ಮಾಡುವಾಗ ಇಲಾಖೆ ಎದುರಿಸುತ್ತಿರುವ ಸಮಸ್ಯೆಗಳ ಹಿನ್ನೆಲೆ, ಮಕ್ಕಳ ಪ್ರೊಫೈಲ್ ನಿರ್ವಹಣೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.