ರಾಜ್ಯ ಸರ್ಕಾರಿ ನೌಕರರು ಇಂದಿನಿಂದ 7ನೇ ವೇತನ ಆಯೋಗದ ವರದಿ ಜಾರಿ, ಹಳೆ ಪಿಂಚಣಿ ಜಾರಿಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದು, ಮುಷ್ಕರ ಹಿನ್ನೆಲೆಯಲ್ಲಿ ಆಸ್ಪತ್ರೆ, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡಲಾಗುತ್ತಿದೆ.
ಇನ್ನು ಮುಷ್ಕರ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆ ಮುಂದೂಡಲಾಗಿದ್ದು, ಇಂದು ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆಯನ್ನು ಮುಷ್ಕರದ ಹಿನ್ನೆಲೆಯಲ್ಲಿ ಬಂದ್ ಮಾಡಲಾಗಿದೆ.
ಮುಷ್ಕರಕ್ಕೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಕೂಡ ಬೆಂಬಲ ನೀಡಿದ್ದು ರಾಜ್ಯದ ಹಲವೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್ ಮಾಡಲಾಗಿದ್ದು, ಸದ್ಯ ಇದರಿಂದ ರೋಗಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.