ಬೆಂಗಳೂರು: ಇದೇ 21ರಂದು ರಾಜ್ಯಾದ್ಯಂತ ಕೊರೋನಾ ಲಸಿಕಾ ಮೇಳ ಹಮ್ಮಿಕೊಳ್ಳಲಾಗಿದ್ದು, ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರು ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.
ಹೌದು, 45 ವರ್ಷ ಮೇಲ್ಪಟ್ಟವರಿಗೆ ಕರೋನ ಲಸಿಕೆ ಹಾಕಲು ಮೊದಲ ಆದ್ಯತೆ ನೀಡಲಾಗಿದ್ದು, 2ನೇ ಡೋಸ್ ಬಾಕಿ ಇರುವವರಿಗೆ ಹಾಗೂ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಲಸಿಕಾಕರಣ ನಡೆಯಲಿದೆ ಎಂದು ತಿಳಿಸಿದೆ.
ಅಷ್ಟೇ ಅಲ್ಲದೆ, ಕೊವ್ಯಾಕ್ಸಿನ್ ಲಸಿಕೆಯ ಮೊದಲನೇ ಡೋಸ್ ಲಸಿಕಾಕರಣ ನಡೆಯಲಿದೆ ಎಂದು ತಿಳಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.