ದಾವಣಗೆರೆ : ಗಣೇಶನ ನಿಮಜ್ಜನ ಮೆರವಣಿಗೆ (Ganesha immersion procession) ವೇಳೆ ಕಲ್ಲು ತೂರಾಟ ನಡೆದಿರುವ ಘಟನೆ ದಾವಣಗೆರೆಯಲ್ಲಿ ಗುರುವಾರ ಸಂಜೆ ನಡೆದಿದೆ.
ಹೌದು, ದಾವಣಗೆರೆ ವೆಂಕಾ ಭೋವಿ ಕಾಲೋನಿಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಹಲವಾರು ಮನೆಗಳು ಮತ್ತು ವಾಹನಗಳ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ.
ಇದನ್ನೂ ಓದಿ: ಗೃಹಲಕ್ಷ್ಮಿಯರಿಗೆ ಶಾಕಿಂಗ್ ಸುದ್ದಿ.. ಇವರಿಗೆ ಬರಲ್ಲ 2 ಸಾವಿರ ರೂ..!
ದಾವಣಗೆರೆ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟಕ್ಕೆ ಕಾರಣವೇನು?
ಇದಕ್ಕೂ ಮುನ್ನ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ನಡೆಯುವ ವೇಳೆ ಕಲ್ಲು ತೂರಾಟ ನಡೆದಿತ್ತು. ಇದರಿಂದ ಹಿಂದೂ ಮುಖಂಡರು ನಾಗಮಂಗಲ ಕಲ್ಲುತೂರಾಟ ಪ್ರಕರಣ ಹಾಗೂ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದರು.
ಆಗ ಹಿಂದೂ ಜಾಗರಣ ವೇದಿಕೆಯ ಸತೀಶ್ ಪೂಜಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಗಣೇಶ ಮೆರವಣಿಗೆಯಲ್ಲಿ ಸತೀಶ್ ಪೂಜಾರಿ ಭಾಗವಹಿಸಿದ್ದರು. ಮೆರವಣಿಗೆ ಸಾಗುವ ಕಡೆ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರು ಸೇರಿದ್ದರು. ಈ ವೇಳೆ ಕಲ್ಲು ತೂರಾಟ ನಡೆದಿದೆ.
ಇದನ್ನೂ ಓದಿ: ವಿದ್ಯಾರ್ಥಿ ವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪೊಲೀಸ್ ಅಧಿಕಾರಿಗೆ ಗಾಯ
ನಾಗಮಂಗಲ ಘಟನೆ ಮಾಸುವ ಮುನ್ನವೇ ಅದೇ ರೀತಿ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಅರಳಿ ಮರ ಸರ್ಕಲ್ ಬಳಿ ಗಣೇಶ ಮೆರವಣಿಗೆ ನಡೆಯುತ್ತಿದ್ದ ವೇಳೆ ಕಲ್ಲು ತೂರಾಟ ನಡೆಸಲಾಗಿದೆ. ಕಿಡಿಗೇಡಿಗಳು ಪೊಲೀಸರ ಮೇಲೆಯೇ ಕಲ್ಲು ಎಸೆದಿದ್ದಾರೆ.
ಕಲ್ಲು ತೂರಾಟದಲ್ಲಿ DCRB ಪೊಲೀಸ್ ಸಿಬ್ಬಂದಿ ರಘು ಎಂಬುವವರ ತಲೆಗೆ ಗಾಯವಾಗಿದೆ. ಸಿಬ್ಬಂದಿ ಕೊರತೆಯಿಂದ ಗಲಾಟೆ ನಿಯಂತ್ರಿಸಲು ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ ಹರಸಾಹಸ ಪಟ್ಟಿದ್ದಾರೆ. ನಂತರ ಪೊಲೀಸ್ ಸರ್ಪಗಾವಲಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ನಡೆದಿದೆ.
ಇದನ್ನೂ ಓದಿ: ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ
ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ: ವಿಜಯೇಂದ್ರ ಕಿಡಿ
ನಾಗಮಂಗಲದ ಘಟನೆ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಗಣೇಶೋತ್ಸವ ಮೆರವಣಿಗೆಯ ಮೇಲೆ ದಾಳಿಯಲ್ಲಿ ಕಾನೂನು ಸುವ್ಯವಸ್ಥೆಯ ವಿಫಲತೆ ಎದ್ದುಕಾಣುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ ಕಾರಿದ್ದಾರೆ. ಇದಕ್ಕೆಲ್ಲಾ ಕಾಂಗ್ರೆಸ್ ಸರ್ಕಾರವೇ ಕಾರಣ.
ತನ್ನ ಭ್ರಷ್ಟ ಹಗರಣಗಳ ನಡುವೆ ಜನರ ಗಮನ ಬೇರೆಡೆ ಸೆಳೆಯಲು ಕೆಲವು ಘಟನೆಗಳನ್ನು ಸೃಷ್ಠಿಮಾಡುತ್ತಿದೆ. ಅವು ಹಿಂದೂ ಸಮುದಾಯದ ಭಾವನೆ ಕೆರಳಿಸಲು ಗಣೇಶೋತ್ಸವ ಮೆರವಣಿಗೆಗಳ ಮೇಲೆ ದಾಳಿ ನಡೆಸುತ್ತಿವೆ ಎಂದಿದ್ದಾರೆ.