ಬಳ್ಳಾರಿ: ಕರೋನ ಉಲ್ಬಣ ಹಿನ್ನಲೆ, ಬಳ್ಳಾರಿ ಜಿಲ್ಲೆಯಲ್ಲಿ ಜೂನ್ 7ರವರೆಗೆ ಕಠಿಣ ಲಾಕ್ ಡೌನ್ ಜಾರಿ ಮಾಡಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಿಪಾಟಿ ಅವರು ಇಂದು ಆದೇಶಿಸಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಿಪಾಟಿ ಅವರು, ಜೂನ್ 7ರವರೆಗೆ ಕಠಿಣ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಮೇ 31 & ಜೂನ್ 1ರಂದು ಮಾತ್ರವೇ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿರಲಿದ್ದು, ಅಗತ್ಯವಾದಷ್ಟು ವಸ್ತುಗಳನ್ನು ಅಂದೇ ಖರೀದಿಸಬೇಕು ಎಂದು ಹೇಳಿದ್ದಾರೆ.
ಇನ್ನು, ತುರ್ತು ಸಮಸ್ಯೆ ಅಥವಾ ಕೆಲಸಗಳಿಗೆ ಮಾತ್ರವೇ ಸಂಚಾರಕ್ಕೆ ಅವಕಾಶವಿರಲಿದ್ದು, ನಿಯಮ ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯದೆಯಡಿ ದೂರು ದಾಖಲಿಸಿಕೊಂಡು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.