ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ

ಶಿವಮೊಗ್ಗ| ಇಲ್ಲಿನ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಹೌದು, ಶಿವಮೊಗ್ಗದ ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ವಿದ್ಯಾರ್ಥಿನಿ. ಹಾಸ್ಟೆಲ್‌ನ…

Student body found hanging on shimogga hostel terrace

ಶಿವಮೊಗ್ಗ| ಇಲ್ಲಿನ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ.

ಹೌದು, ಶಿವಮೊಗ್ಗದ ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ವಿದ್ಯಾರ್ಥಿನಿ. ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್‌ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಡಿವಿಎಸ್‌ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ಪದವಿ ಓದುತ್ತಿದ್ದ ವನಿಷಾ, ನೀರಿನ ಟ್ಯಾಂಕ್‌ ಪಕ್ಕದಲ್ಲಿ ಮೃತ ಸ್ಥಿತಿಯಲ್ಲಿ ಕಂಡುಬಂದಿದ್ದಾಳೆ.

ಟೆರೇಸ್‌ ಮೇಲೆ ಹೋದ ವಿದ್ಯಾರ್ಥಿನಿಯರು ಇದನ್ನು ಗಮನಿಸಿ ಕೂಡಲೇ ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Vijayaprabha Mobile App free

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply