ದಯವಿಟ್ಟು ನೇಹಾಳನ್ನು ಸೀರೆಯಲ್ಲಿ ನೋಡೋ ಆಸೆ ಈಡೇರಿಸಿ!; ಪ್ರಧಾನಿ ಮೋದಿಗೆ ವಿದ್ಯಾರ್ಥಿ ಮಾಡಿದ ಪೋಸ್ಟ್ ಎಲ್ಲೆಡೆ ವೈರಲ್!

ಕೋವಿಡ್-19 ಎರಡನೇ ಅಲೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ವರ್ಷದ ಸಿಬಿಎಸ್‌ಇ ಮತ್ತು ಐಸಿಎಸ್ಇ 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸುವುದಾಗಿ ಕೇಂದ್ರ ಸರಕಾರವು ಮಂಗಳವಾರ ಆದೇಶ ಹೊರಡಿಸಿತ್ತು. ಪರೀಕ್ಷೆ ರದ್ದಾದ ಬೆನ್ನಲ್ಲೇ CBSE…

ಕೋವಿಡ್-19 ಎರಡನೇ ಅಲೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ವರ್ಷದ ಸಿಬಿಎಸ್‌ಇ ಮತ್ತು ಐಸಿಎಸ್ಇ 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸುವುದಾಗಿ ಕೇಂದ್ರ ಸರಕಾರವು ಮಂಗಳವಾರ ಆದೇಶ ಹೊರಡಿಸಿತ್ತು.

ಪರೀಕ್ಷೆ ರದ್ದಾದ ಬೆನ್ನಲ್ಲೇ CBSE 12ನೇ ತರಗತಿಯ ಕುಕ್ಕಿ ಅಗರ್ವಾಲ್​​ ಎಂಬ ವಿದ್ಯಾರ್ಥಿ ಪ್ರಧಾನಿ ನರೇಂದ್ರ ಮೋದಿಯವರ ಬಳಿ ವಿಚಿತ್ರ ಮನವಿಯನ್ನು ಮಾಡಿದ್ದು, ಸರ್​​ ಪರೀಕ್ಷೆಯೇನೋ ರದ್ದು ಮಾಡಿದ್ದೀರ, ದಯವಿಟ್ಟು ಫೇರ್​ವೆಲ್​ ಕಾರ್ಯಕ್ರಮಕ್ಕಾದರೂ ಅನುಮತಿ ನೀಡಿ ಎಂದು ಕೇಳಿದ್ದು, ನಾನು ಫೇರ್​ವೆಲ್​ ಪಾರ್ಟಿಯಲ್ಲಿ ನೇಹಾಳನ್ನು ಸೀರೆಯಲ್ಲಿ ನೋಡಬೇಕು ಅಂದುಕೊಂಡಿದ್ದೇನೆ ಎಂದು ಟ್ವೀಟ್​ ಮಾಡಿದ್ದಾನೆ.

ಕುಕಿ ಅಗರ್‌ವಾಲ್‌ ಎಂಬ ವಿದ್ಯಾರ್ಥಿಯ ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಸಕತ್‌ ವೈರಲ್‌ ಆಗಿದ್ದು, ನೋಡಿದವರನ್ನು ನಗೆಗಡಲಿನಲ್ಲಿ ತೇಲುವಂತೆ ಮಾಡಿದೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.