ಹಾಸನ: ಸಹಪಾಠಿಗಳಿಂದ ನಿಂದನೆಗೊಳಗಾದ ಹರ್ಷಿತ್ ಗೌಡ (16) ಎಂಬ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹೌದು, ಹಾಸನ ಜಿಲ್ಲೆಯ ಕಂಚಮಾರನಹಳ್ಳಿ ಹತ್ತಿರದ ಖಾಸಗಿ ಶಾಲೆಯ ವಿದ್ಯಾರ್ಥಿ ಹರ್ಷಿತ್ ಗೌಡಗೆ 1 ವರ್ಷದ ಹಿಂದೆ ಸ್ಟ್ರೋಕ್ ಆಗಿತ್ತು. ಇದನ್ನೇ ಕಾರಣವಾಗಿಟ್ಟುಕೊಂಡು ಆತನ ಸಹಪಾಠಿಗಳು ಶಾಲೆಗೆ ಹೋದಾಗ ರೇಗಿಸುತ್ತಿದ್ದರಂತೆ.
ಇದರಿಂದ ಅವಮಾನಕ್ಕೀಡಾಗಿ ಬೇಸರಗೊಂಡಿದ್ದ ವಿದ್ಯಾರ್ಥಿ ಹರ್ಷಿತ್ ಗೌಡ, ದನಗಳನ್ನು ಮೇಯಿಸಲು ಹೋದಾಗ ಹೊಲದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಹಾಸನದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.