ಹಾವೇರಿ: ಕೊರೋನಾದಿಂದ ಮೃತಪಟ್ಟ ಪರಿಶಿಷ್ಟ ಜಾತಿಯ ಕುಟುಂಬದ ಅವಲಂಬಿತರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯಧನ ಮತ್ತು ಸಾಲಸೌಲಭ್ಯ ನೀಡಲು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕೊರೋನಾದಿಂದ ಮೃತಪಟ್ಟ ಪರಿಶಿಷ್ಟ ಜಾತಿಯ ಕುಟುಂಬದ ಅರ್ಹರಿಗೆ ಸಹಾಯಧನ ₹1 ಲಕ್ಷ, NSFDC ಅವಧಿ ಸಾಲ ₹4 ಲಕ್ಷ ಸೇರಿ ಒಟ್ಟು ₹5 ಲಕ್ಷ ನೀಡಲಾಗುತ್ತದೆ.
ಇನ್ನು,ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಜೂನ್ 30 ರಂದು ಕಡೆ ದಿನ ಆಗಿದ್ದು, ಹೆಚ್ಚಿನ ಮಾಹಿತಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾವೇರಿ ಕಛೇರಿ ಅಥವಾ ದೂರವಾಣಿ ಸಂಖ್ಯೆ 08375-249012ಗೆ ಕರೆ ಮಾಡಬಹುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.