ಚಿತ್ರದುರ್ಗ : ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಇಂದು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾದ ಹಿನ್ನೆಲೆ ಸಚಿವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವ ಡಿ.ವಿ.ಸದಾನಂದಗೌಡ ಅವರು ರಾಜ್ಯ ಪ್ರವಾಸ ಕೈಗೊಂಡು ಪಕ್ಷ ಸಂಘಟನೆ ಮಾಡುತ್ತಿದ್ದು, ಈ ವೇಳೆ ಶುಗರ್ ಲೆವೆಲ್ ಕಡಿಮೆಯಾದ ಸಮಸ್ಯೆ ಕಾಣಿಸಿಕೊಂಡಿತು ಎನ್ನಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ನಿನ್ನೆಯಷ್ಟೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಚಿವ ಡಿ.ವಿ.ಸದಾನಂದಗೌಡ ಅವರು ಕಿಡಿಕಾರಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.