ರಾಜಕಾರಣದಲ್ಲಿ ನಾನು ಇಲ್ಲಿ ತನಕ ಕುಟುಂಬ ರಾಜಕಾರಣ ಮಾಡಿಲ್ಲ ಎಂದು ಚಾಮುಂಡಿ ತಾಯಿ ಮೇಲೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಆಣೆ ಮಾಡಿದ್ದಾರೆ.
ಹೌದು, ಸುದ್ದಿಗೋಷ್ಠಿಯಲ್ಲಿ ಪುತ್ರ ಅಭಿಷೇಕ್ ಅಂಬರೀಶ್ ವಿಧಾನಸಭೆ ಟಿಕೆಟ್ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್ ಅವರು, ನಾನು ರಾಜಕಾರಣದಲ್ಲಿ ಇರುವ ತನಕ ನನ್ನ ಮಗ ರಾಜಕಾರಣಕ್ಕೆ ಬರುವುದಿಲ್ಲ ಎಂದು ಘೋಷಿಸಿದರು. ಅಭಿಷೇಕ್ ಅಂಬರೀಶ್‌ಗೆ ಎರಡು ಪಕ್ಷಗಳು ಟಿಕೆಟ್ ನೀಡುವಂತೆ ಮುಂದೆ ಬಂದಿದ್ದರೂ ಅದನ್ನು ತಿರಸ್ಕರಿಸಿದ್ದೇನೆ ಎಂದು ಅವರು ಹೇಳಿದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.