Supreme Court :ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮತ್ತು ವೀಕ್ಷಿಸುವುದು ವೀಕ್ಷಣೆ ಅಕ್ಷಮ್ಯ ಅಪರಾಧ ಎಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಹಾಗು ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹೌದು, ಮಕ್ಕಳ ಅಶ್ಲೀಲ ಚಿತ್ರ ಸಂಗ್ರಹಿಸುವುದು, ಡೌನ್‌ಲೋಡ್ ಮತ್ತು ವೀಕ್ಷಿಸುವುದು ಪೋಕ್ಸೊ (POCSO) ಕಾನೂನಿನ ಅಡಿಯಲ್ಲಿ ಅಪರಾಧ ಎಂದು CJI DY ಚಂದ್ರಚೂಡ್ ನೇತೃತ್ವದ ಪೀಠ ತೀರ್ಪು ನೀಡಿದೆ. ಈ ಸಂಬಂಧ ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ರದ್ದುಪಡಿಸಿದ್ದು, ಅದು ಪ್ರಮಾದವಾಗಿತ್ತು ಎಂದು ಹೇಳಿದೆ. 28 ವರ್ಷದ ಆರೋಪಿಯನ್ನು ಮದ್ರಾಸ್ ಹೈಕೋರ್ಟ್ ಈ ಹಿಂದೆ ಆರೋಪ ಮುಕ್ತಗೊಳಿಸಿತ್ತು.
ಇದನ್ನೂ ಓದಿ: ಆಧಾರ್ ಜೋಡಣೆ ಮಾಡಲು ಇಂದೇ ಕೊನೆದಿನ, ಮಾಡಿಸದಿದ್ದರೆ ಸಬ್ಸಿಡಿ ರದ್ದು- ಸ್ಪಷ್ಟನೆ
ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಮಕ್ಕಳ ಅಶ್ಲೀಲ ಚಿತ್ರಗಳ ಬಳಕೆಯನ್ನು ತಡೆಯಲು ತುರ್ತು ಕಾನೂನು ತರುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.