ವಿಜಯನಗರ(ಹೊಸಪೇಟೆ): ಪತ್ನಿಯ ಶೀಲ ಶಂಕಿಸಿ ಪತಿಯೇ ಕೊಲೆ (murdered) ಮಾಡಿರುವ ಘಟನೆ ಹೊಸಪೇಟೆ ತಾಲೂಕಿನ ಗಾದಿಗನೂರಿನಲ್ಲಿ ಸೋಮವಾರ ನಡೆದಿದೆ.
ಹೌದು, ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದ ಮೇಟಿ ಶ್ರುತಿ (28) ಅವರ ಪತಿ ಮೇಟಿ ರಾಮಲಿಂಗಪ್ಪ (31) ಅವರು ಕತ್ತು ಹಿಸುಕಿ, ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು, ಈ ಕೃತ್ಯಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇರೆಗೆ ಕುರುಬರ ಶರಣಮ್ಮ, ದೇವೀರಪ್ಪ, ನಾಗಮ್ಮ ಎಂಬುವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಮೃತಳ ತಂದೆ ಮೈಲಾರಪ್ಪ ಪೊಲೀಸರಿಗೆ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕೇಂದ್ರ ಸರ್ಕಾರದಿಂದ ಮಹಿಳೆಯರಿಗಾಗಿ ಲಖ್ಪತಿ ದೀದಿ ಯೋಜನೆ: ಈ ದಾಖಲೆಗಳಿದ್ರೆ ಸಿಗಲಿದೆ 5 ಲಕ್ಷ ಬಡ್ಡಿ ರಹಿತ ಸಾಲ!