ಬೆಂಗಳೂರು: ಹಾಲು ಉತ್ಪಾದಕರಿಗೆ ಬೆಂಗಳೂರು ಹಾಲು ಒಕ್ಕೂಟ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, 1 ರೂ. ಹಾಲಿನ ದರ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ನರಸಿಂಹಮೂರ್ತಿ ಅವರು ತಿಳಿಸಿದ್ದಾರೆ.
ಹೌದು , ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ನರಸಿಂಹಮೂರ್ತಿ ಅವರು, ಏಪ್ರಿಲ್ 1 ರಿಂದ ಒಂದು ಲೀಟರ್ ಹಾಲಿಗೆ 1.50 ರೂ. ಹೆಚ್ಚಾಗಲಿದ್ದು, ಫ್ಯಾಟ್ ಹೆಚ್ಚಾದಂತೆ 22 ಪೈಸೆಯಂತೆ ಹೆಚ್ಚಿಸಲಾಗುತ್ತದೆ. ಇದರಿಂದ ರೈತರಿಗೆ ಅಧಿಕ ಹಣ ಸಿಗಲಿದ್ದು, ಜೊತೆಗೆ ಎಂಪಿಸಿಎಸ್ 1.5 ರೂಪಾಯಿ ನಿರ್ವಹಣಾ ವೆಚ್ಚ, ಕಾರ್ಯನಿರ್ವಾಹಕ ಅಧಿಕಾರಿಗೆ 40 ಪೈಸೆ ಇನ್ಸೆಂಟಿವ್ ಕೂಡ ಸಿಗಲಿದೆ ಎಂದು ಹೇಳಿದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.