ವೆಸ್ಟ್ ಇಂಡೀಸ್ ತಂಡವನ್ನು ಅವರದೇ ನೆಲದಲ್ಲಿ ಏಕದಿನದಲ್ಲಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ ಇಂದಿನಿಂದ ಟಿ20 ಪಾಂಡುವೂ ಆಡಲಿದೆ. 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಪೋರ್ಟ್ ಆಫ್ ಸ್ಪೇನ್‌ನಲ್ಲಿ ಇಂದು ನಡೆಯಲಿದೆ.
ಇನ್ನು, ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಿಂದ ದೂರವಾಗಿದ್ದ ರೋಹಿತ್ ಶರ್ಮಾ ಟಿ20 ಸರಣಿಯನ್ನು ಮುನ್ನಡೆಸಲಿದ್ದು, ಏಕದಿನ ಸರಣಿ ಗೆಲುವಿನೊಂದಿಗೆ ಉತ್ಸಾಹದಿಂದ ಟೀಂ ಇಂಡಿಯಾ ಕಣಕ್ಕೆ ಇಳಿಯುತ್ತಿದ್ದು, ವಿಂಡೀಸ್ ಪ್ರತೀಕಾರ ತೀರಿಸಿಕೊಳ್ಳಲು ಹವಣಿಸುತ್ತಿದೆ.
ತಂಡಗಳ ಸಂಭಾವ್ಯ ಪಟ್ಟಿ ಹೀಗಿದೆ:
ವೆಸ್ಟ್ ಇಂಡೀಸ್ ತಂಡ: ಬ್ರ್ಯಾಂಡನ್ ಕಿಂಗ್, ಕೈಲ್ ಮೇಯರ್ಸ್, ಶಿಮ್ರಾನ್ ಹೆಟ್ಮೆಯರ್, ನಿಕೋಲಸ್ ಪೂರನ್ (w/c), ರೋವ್‌ಮನ್ ಪೊವೆಲ್, ಓಡಿಯನ್ ಸ್ಮಿತ್, ಜೇಸನ್ ಹೋಲ್ಡರ್, ರೊಮಾರಿಯೋ ಶೆಫರ್ಡ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್, ಹೇಡನ್ ವಾಲ್ಷ್, ಅಕೇಲ್ ಹೋಸೇನ್, ಕೀಮೋ ಪಾಲ್, ಶಮರ್ ಬ್ರೂಕ್ಸ್ , ಡೊಮಿನಿಕ್ ಡ್ರೇಕ್ಸ್, ಡೆವೊನ್ ಥಾಮಸ್
ಭಾರತ ತಂಡ: ರೋಹಿತ್ ಶರ್ಮಾ(ನಾಯಕ), ರಿಷಬ್ ಪಂತ್(ವಿಕೆಟ್ ಕೀಪರ್), ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ಹರ್ಷಲ್ ಪಟೇಲ್, ರವಿಚಂದ್ರನ್ ಅಶ್ವಿನ್, ಶ್ರೇಯಸ್ ಅಯ್ಯರ್ , ಕುಲದೀಪ್ ಯಾದವ್, ಅವೇಶ್ ಖಾನ್, ಇಶಾನ್ ಕಿಶನ್