ನವದೆಹಲಿ: ಭಾರತದಲ್ಲಿ ಈ ವರ್ಷದ ಅಕ್ಟೋಬರ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನಡೆಯುವ ಸ್ಥಳಗಳನ್ನು ಅಂತಿಮಗೊಳಿಸಲಾಗಿದ್ದು, ಫೈನಲ್ ಪಂದ್ಯ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ವಿಶ್ವಕಪ್ ಪಂದ್ಯಗಳು ಬೆಂಗಳೂರು, ದೆಹಲಿ, ಮುಂಬೈ, ಚೆನ್ನೈ, ಕೋಲ್ಕತಾ, ಹೈದರಾಬಾದ್ ಮತ್ತು ಧರ್ಮಶಾಲಾ ಸೇರಿ ದೇಶದ 9 ಕಡೆ ಪಂದ್ಯಗಳು ನಡೆಯಲಿವೆ. ಮತ್ತೊಂದೆಡೆ, ಪಾಕಿಸ್ತಾನ ಕ್ರಿಕೆಟ್ ತಂಡದ ವೀಸಾ ಸಮಸ್ಯೆ ತೆಗೆದುಹಾಕಲಾಗಿದ್ದು, ಈ ತಂಡವು ವಿಶ್ವಕಪ್‌ನಲ್ಲಿ ಭಾಗವಹಿಸಲಿದೆ.
ಪಾಕ್ ತಂಡದ ಆಟಗಾರರಿಗೆ ವೀಸಾ:
ಮುಂಬರುವ ಅಕ್ಟೋಬರ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಪಾಕ್ ಆಟಗಾರರಿಗೆ ವೀಸಾ ನೀಡಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.
ನಿನ್ನೆ ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆದ ಬಿಸಿಸಿಐ ಕೌನ್ಸಿಲ್ ಸಭೆಯಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಈ ಮಾಹಿತಿ ನೀಡಿದ್ದಾರೆ. ಆಟಗಾರರು ವೀಸಾ ಪಡೆಯಲಿದ್ದಾರೆ. ಆದರೆ, ಪಾಕ್ ಅಭಿಮಾನಿಗಳಿಗೆ ವೀಸಾ ನೀಡಲಾಗುತ್ತದೆಯೋ, ಇಲ್ಲವೋ ಎಂಬುದರ ಬಗ್ಗೆ ನಿರ್ಧಾರವಾಗಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.