ಬೆಳಗಾವಿ: ಹೈಸ್ಕೂಲ್ ವಿದ್ಯಾರ್ಥಿನಿಯೊಬ್ಬಳಿಗೆ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ ಕುಂದಾನಗರಿ ಬೆಳಗಾವಿಯಲ್ಲಿ ನಡೆದಿದೆ.
ಹೌದು, ಬಾಲಕಿಯನ್ನು ಪುಸಲಾಯಿಸಿ ರೊಮ್ಯಾನ್ಸ್ ಮಾಡಿರುವ ಶಿಕ್ಷಕ, ಮೊಬೈಲ್ ನಲ್ಲಿ ಫೋಟೋ ತೆಗೆದು ಆಕೆಗೆ 3 ವರ್ಷದಿಂದ ಕಿರುಕುಳ ನೀಡುತ್ತಿದ್ದ. ಬಾಲಕಿ ಕಾಲೇಜು ಸೇರಿ, ಮನೆಯಲ್ಲಿ ಮದುವೆ ಗೊತ್ತು ಮಾಡುವ ವೇಳೆ, ವಿದ್ಯಾರ್ಥಿನಿ ಜೊತೆಗೆ ಶಿಕ್ಷಕನ ಲವ್ವಿಡವ್ವಿಯ ಅಶ್ಲೀಲ ಫೋಟೋ ವೈರಲ್ ಆಗಿದ್ದು, ಇದರಿಂದ ಕೆರಳಿದ ಗ್ರಾಮಸ್ಥರು ಶಾಲೆಗೆ ಆಗಮಿಸಿದ ಶಿಕ್ಷಕನಿಗೆ ಧರ್ಮದೇಟು ಕೊಟ್ಟಿರುವ ಘಟನೆ ಸವದತ್ತಿ ತಾಲೂಕಿನ ಯಕ್ಕುಂಡಿ ಗ್ರಾಮದಲ್ಲಿ ನಡೆದಿದೆ.
ಶಾಲೆಗೆ ಆಗಮಿಸಿದ ಜನರು ಹಿಗ್ಗಾಮುಗ್ಗಾ ಥಳಿಸಿದ್ದಲ್ಲದೇ ಶಿಕ್ಷಕನ ವಿರುದ್ಧ ದೂರು ನೀಡಿ ಪೊಲೀಸರಿಗೆ ಒಪ್ಪಿಸಿದ್ದು, ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿರುವ 44 ವರ್ಷದ ಶಿಕ್ಷಕ ಮೇಲೆ ಗ್ರಾಮಸ್ಥರು, ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆ