ಹುಬ್ಬಳ್ಳಿ : ದೇವಸ್ಥಾನ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ‘ಈ ವಿಚಾರದಲ್ಲಿ ಅಧಿಕಾರಿಗಳು ತರಾತುರಿ ತೋರಿಸುವುದು ಸರಿಯಲ್ಲ’ ಎಂದು ಹೇಳಿದ್ದಾರೆ.
ಹೌದು, ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ಈ ಸಂಬಂಧ ಸುಪ್ರೀಂಕೋರ್ಟ್ ತೀರ್ಪು ಇರಬಹುದು. ಆದರೆ ಪುರಾತನ ದೇವಾಲಯ ತೆರವು ವೇಳೆ ಅರ್ಚಾತುರ್ಯ ಆಗಿದ್ದು, ಕೋರ್ಟ್ ತೀರ್ಪಿನಲ್ಲಿ ಕೆಲವು ಷರತ್ತು ಹಾಕಲಾಗಿದೆ. ಜೊತೆಗೆ ಕೆಲ ನಿರ್ದೇಶನಗಳಿವೆ. ಆದರೂ ತರಾತುರಿಯಲ್ಲಿ ದೇವಾಲಯ ಒಡೆಯಬಾರದು ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.