ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಇಂದು ನಸುಕಿನ ಜಾವ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಪುತಲಪಟ್ಟು ಮಂಡಲದ ಪಿ.ಕೊಟ್ಟಕೋಟದಲ್ಲಿ ಪೊಲೀಸರಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಪೊಲೀಸರು ಅಸುನೀಗಿದ್ದಾರೆ ಎನ್ನಲಾಗಿದೆ.
ಇನ್ನು, ಈ ಮೂವರು ಪೊಲೀಸರು ತಿರುಪತಿ ದೇವಸ್ಥಾನಕ್ಕೆ ಹೋಗುತ್ತಿದ್ದರು ಎಂದು ತಿಳಿದು ಬಂದಿದ್ದು,ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.