ವಿದ್ಯಾರ್ಥಿಗಳಿದ್ದ ಎರಡು ಬಸ್‌ಗಳು ಚಾಲಕನ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ 15 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಮಣಿಪುರದ ನೋನಿ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಹೌದು, ನೋನಿ ಜಿಲ್ಲೆಯ ಬಿಸ್ನುಪುರ್-ಖೌಪುಂ ರಸ್ತೆಯಲ್ಲಿ ಈ ದುರಂತ ಸಂಭವಿಸಿದ್ದು, ಅಧ್ಯಯನ ಪ್ರವಾಸಕ್ಕೆಂದು ಎರಡು ಬಸ್‌ಗಳಲ್ಲಿ ಥಂಬಾಲ್ನು ಹೈಯರ್ ಸೆಕೆಂಡರಿ ಶಾಲೆಯ ಮಕ್ಕಳು ಖೌಪುಂಗೆ ತೆರಳುತ್ತಿದ್ದಾಗ ಎರಡೂ ಬಸ್‌ಗಳು ನಿಯಂತ್ರಣ ಕಳೆದುಕೊಂಡಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದ್ದು, ಹಲವು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.