ಬೆಂಗಳೂರು: ತಂದೆಯೇ ಮಗಳನ್ನು ಭೀಕರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ಬೆಂಗಳೂರಿನ ಕೊಡಿಗೆಗಳ್ಳಿಯ ಧನಲಕ್ಷ್ಮಿ ಲೇಔಟ್ನಲ್ಲಿ ನಡೆದಿದೆ.
ಹೌದು, ಆಶಾ (32) ಮೃತ ದುರ್ದೈವಿಯಾಗಿದ್ದು, ಮದುವೆಯಾಗಿದ್ದ ಆಶಾ ಗಂಡನಿಂದ ದೂರವಾಗಿದ್ದಳು. ತಂದೆ, ತಾಯಿ, ತಂಗಿಗೆ ಕಿರುಕುಳ ನೀಡುತ್ತಿದ್ದಳಂತೆ. ಇದೇ ಕಾರಣಕ್ಕೆ ರಾತ್ರಿ ಜಗಳ ನಡೆದಿದ್ದು, ರಮೇಶ್ ತನ್ನ ಮಗಳನ್ನು ಕೊಲೆ ಮಾಡಿದ್ದಾನೆ.
ಇದನ್ನು ಓದಿ: ಕಬ್ಜ ಸಿನಿಮಾ ಮೂಲಕ ಗ್ರ್ಯಾಂಡ್ ಎಂಟ್ರೀ ಕೊಟ್ಟ ಉಪ್ಪಿ, ಸುದೀಪ್, ಶಿವಣ್ಣ; ಸಿನಿಮಾ ನೋಡಿ ಪ್ರೇಕ್ಷಕ ಪ್ರಭುಗಳು ಹೇಳಿದ್ದೇನು?
ಈ ವೇಳೆ ಮಗಳ ಜೊತೆಗಿನ ಜಗಳದಿಂದ ಕೋಪಗೊಂಡ ತಂದೆ ರಮೇಶ್ ದೊಣ್ಣೆಯಿಂದ ಆಕೆಯ ತಲೆಗೆ ಹೊಡೆದಿದ್ದಾನೆ. ಈ ವೇಳೆ ಆಶಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆ ಸಂಬಂಧ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ರಮೇಶ್ನನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಇದನ್ನು ಓದಿ: Adhar Card:: ರಿಜಿಸ್ಟರ್ ಮೊಬೈಲ್ ಸಂಖ್ಯೆ ಇಲ್ಲದೆಯೂ ‘ಆಧಾರ್’ ಕಾರ್ಡ್ ಹೀಗೆ ಡೌನ್‌ಲೋಡ್ ಮಾಡಿ!
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment