ಚಿಕ್ಕಮಗಳೂರು : ಕಾರು ಹಾಗೂ ಕ್ರೂಸರ್ ನಡುವೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತವಾಗಿದ್ದು, ಪ್ರವಾಸಕ್ಕೆ ಬಂದಿದ್ದ 10 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ.
ಹೌದು, ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ಶಾಲಾ ಪ್ರವಾಸಕ್ಕೆ ಬಂದ್ದಿದ್ದ ಕ್ರೂಸರ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ 10 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಮಕ್ಕಳು ಕಲಬುರಗಿ ಜಿಲ್ಲೆಯ ಅಫಜಲಪುರದಿಂದ ಪ್ರವಾಸಕ್ಕೆ ಬಂದಿದ್ದರು.
ಪ್ರವಾಸ ಮುಗಿಸಿ ಅಫಜಲಪುರಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.