ಚಿತ್ರದುರ್ಗ: ಚಿತ್ರದುರ್ಗದ ಚಿಕ್ಕಬೆನ್ನೂರು ಗ್ರಾಮದಲ್ಲಿ ಹಾದು ಹೋಗುವ NH-4ರಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹೌದು, ನ್ಯಾಷನಲ್ ಹೈವೇನಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಯಿಂದ ಲಾರಿ ಗುದ್ದಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭಿರವಾಗಿ ಗಾಯಗೊಂಡಿದ್ದಾರೆ.
ಲಾರಿ & ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆಗೆ ಹೊರಟಿತ್ತು. ಅತಿ ವೇಗದಲ್ಲಿ ಹಿಂದಿನಿಂದ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಲಾರಿಯು ಗುದ್ದಿದ ರಭಸಕ್ಕೆ ಕಾರಿನ ಹಿಂಬದಿ ಸೀಟ್‌ನಲ್ಲಿ ಕುಳಿತಿದ್ದ ಇಬ್ಬರು ಮಕ್ಕಳು & ಇಬ್ಬರು ಮಹಿಳೆಯರು ಸ್ಥಳದಲ್ಲೇ ಕಣ್ಣು ಮುಚ್ಚಿದ್ದಾರೆ. ಮುಂಬದಿ ಸೀಟು ಹಾಗೂ ಮಧ್ಯದಲ್ಲಿ ಕುಳಿತಿದ್ದವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |