ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ಹರಡಿದ ಹಿನ್ನೆಲೆಯಲ್ಲಿ 2020 ಮಾರ್ಚ್ 19ರಿಂದ ನಿಂತು ಹೋಗಿದ್ದ ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ `ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್’ ಯೋಜನೆಗೆ ಮರುಜೀವ ಸಿಕ್ಕಿದೆ.
ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಮತ್ತು ಅಯುಷ್ಮಾನ್ ಕರ್ನಾಟಕ ಕಾರ್ಡ್ಗಳನ್ನು ವಿತರಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಇನ್ನೂ 10 ರೂ. ಶುಲ್ಕದೊಂದಿಗೆ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆಯುಷ್ಮಾನ್ ಆರೋಗ್ಯ ಕರ್ನಾಟಕ ಮಾಹಿತಿ ಮುದ್ರಿತ ಕಾಗದವನ್ನು ವಿತರಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದ್ದು, ಈ ಯೋಜನೆಯಲ್ಲಿ ಜನರು ಸುಮಾರು 5 ಲಕ್ಷದವರೆಗೆ ಅರೋಗ್ಯ ವಿಮೆಯನ್ನು ಪಡೆಯಬಹುದು.