ಸದ್ಯದಲ್ಲೇ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುವ ಸಾಧ್ಯತೆಯಿದ್ದು, ಚಿನ್ನದ ದರ ಹೆಚ್ಚಾಗುತ್ತದೆ ಎನ್ನಲಾಗಿದೆ. ಅಮೆರಿಕದಲ್ಲಿ ಬ್ಯಾಂಕಿಂಗ್ ಬಿಕ್ಕಟ್ಟಿನ ಹಿನ್ನೆಲೆ, ಚಿನ್ನ ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲಾಗಿದೆ.
ಹಾಗಾಗಿ, ಮುಂದಿನ 2 ದಿನದಲ್ಲಿ ಚಿನ್ನದ ಬೆಲೆ ಗರಿಷ್ಠ ಮಟ್ಟ ತಲುಪುವ ಸಾಧ್ಯತೆಯಿದೆ ಎಂದು ತಜ್ಞರು ಸೂಚಿಸಿದ್ದಾರೆ. ಈಚೆಗೆ ಯುಎಸ್ ಫೆಡ್ ಬಡ್ಡಿದರ ಹೆಚ್ಚಿಸಿದ ನಂತರ, ಚಿನ್ನದ ದರ ಕಡಿಮೆಯಾಗಿತ್ತು.
ಸದ್ಯ, ಕರ್ನಾಟಕದಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,050ರೂ ತಲುಪಿದೆ. ಹಾಗೆಯೇ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯೂ 55,050ರೂ ಆಗಿದೆ. ಇನ್ನು, ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆಯು ರೂ.75,700 ಆಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment