ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣ ವಿರುದ್ಧ ಸಿಡಿ ಸಂತ್ರಸ್ತೆ ಯುವತಿ ಇಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಹೌದು ಸಿಡಿ ಸಂತ್ರಸ್ತೆ, ದೂರಿನಲ್ಲಿ ರಮೇಶ್ ಜಾರಕಿಹೊಳಿ ತಮ್ಮ ಪ್ರಭಾವ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದರು. ಆದರೆ ಕೆಲಸದ ಬದಲು ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದಿದ್ದರು. ಈ ರೀತಿ ಹೇಳಿದ ಮೇಲೆ ಕೆಲಸ ಕೊಡಿಸೇ ಕೊಡಿಸುತ್ತಾರೆ ಎಂದು ನಂಬಿದ್ದೆ.
ಇನ್ನು ಕೆಲಸಕ್ಕಾಗಿ ಲಕ್ಷಾಂತರ ಹಣ ಕೊಡಲು ನನ್ನ ಬಳಿ ಹಣ ಇಲ್ಲದಿರುವುದನ್ನು ಗಮನಿಸಿ, ರಮೇಶ್ ಜಾರಕಿಹೊಳಿ ಲೈಂಗಿಕವಾಗಿ ನನ್ನನ್ನು ಬಳಸಿಕೊಂಡರು. ಅವರು ಹೇಳಿದಂತೆ ನಡೆದುಕೊಂಡೆ ಎಂದು ಸಿಡಿ ಸಂತ್ರಸ್ತೆ ಯುವತಿ ಆರೋಪಿಸಿದ್ದಾಳೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.