ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ವಿಚಾರ ಸಂಬಂಧ ಪೊಲೀಸ್ ಕಾನ್ಸ್ಟೇಬಲ್ ಅಮಾನತುಗೊಳಿಸಲಾಗಿದೆ.
ಹೌದು, ವಿಜಯಪುರ ಗ್ರಾಮಾಂತರ ಠಾಣೆ ಕಾನ್ಸ್ಟೇಬಲ್ ರಾಜಶೇಖರ ಖಾನಾಪುರ ಅವರನ್ನು ಅಮಾನತುಗೊಳಿಸಿ ಎಸ್ಪಿ ಆನಂದಕುಮಾರ ಆದೇಶಿಸಿದ್ದಾರೆ. ಕಾನ್ಸ್ಟೇಬಲ್ ರಾಜಶೇಖರ ಖಾನಾಪುರ ‘ಪೊಲೀಸರನ್ನು ಬೈಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು’ ಎಂದು ಪೋಸ್ಟ್ ಮಾಡಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಕಾನ್ಸಟೇಬಲ್ ರಾಜಶೇಖರ ಖಾನಾಪುರ ಅಮಾನತುಗೊಳಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.